Posts

Showing posts from March, 2018

ಬ್ಯಾಂಕ್ ಖಾತೆಯಿಂದ ನಿಮ್ಮ ಹಣ ಯಾರೋ ಎಗರಿಸಿದ್ದರೆ ಅದನ್ನು ಬ್ಯಾಂಕ್ ನೀಡಬೇಕು

ಬ್ಯಾಂಕಿನಲ್ಲಿ ನಿಮ್ಮ ಉಳಿತಾಯ ಖಾತೆ ಇರುತ್ತದೆ. ಆ ಖಾತೆಗೆ ನೀವು ಎಟಿಎಂ ಕಾರ್ಡ್ ಕೂಡ ಹೊಂದಿರುತ್ತೀರಿ. ಒಂದು ದಿನ ನಿಮಗೆ ಗೊತ್ತಿಲ್ಲದಂತೆ ನಿಮ್ಮ ಖಾತೆಯಿಂದ ಯಾರೋ ಹಣವನ್ನು ತೆಗುದುಕೊಂಡು ಬಿಡುತ್ತಾರೆ. ನಿಮ್ಮ ಮೊಬೈಲಿಗೆ ಸಂದೇಶ ಬಂದ ಬಳಿಕವೇ ನಿಮಗೆ ವಂಚನೆಯಾಗಿರುವುದು ಗೊತ್ತಾಗುತ್ತದೆ. ಆಗ ನೀವು ಬ್ಯಾಂಕ್‌ಗೆ ಓಡುತ್ತೀರಿ. ದೂರು ನೀಡುತ್ತೀರಿ. ನೀವು ಕಳೆದುಕೊಂಡ ಹಣ ನಿಮಗೆ ಮರಳಿ ಸಿಗುತ್ತದೆಯೆ? ಬ್ಯಾಂಕ್‌ನವರು ಸುಲಭಕ್ಕೆ ನಿಮಗೆ ಹಣ ಕೊಡುತ್ತಾರೆಯೆ? ಕೊಡದಿದ್ದರೆ ನೀವು ಗ್ರಾಹಕ ವೇದಿಕೆಯಲ್ಲಿ ಪರಿಹಾರ ಕೋರಬಹುದು. ಇಲ್ಲಿ ಅಂಥದ್ದೊಂದು ಪ್ರಕರಣ ಇದೆ. ------ ಬೆಂಗಳೂರು ವಿವಿಯ ಕೋಲಾರದ ಕನ್ನಡ ಸ್ಟಡಿ ಸೆಂಟರ್‌ನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ.ಡಿ.ಡಾಮಿನಿಕ್ ಎನ್ನುವವರು ಅಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ೨೦೦೮ರಲ್ಲಿಯೇ ಉಳಿತಾಯ ಖಾತೆಯನ್ನು ತೆರೆದಿದ್ದರು. ಅವರ ಬಳಿ ಡೆಬಿಟ್ ಕಾರ್ಡ್ ಕೂಡ ಇತ್ತು. ಈ ಖಾತೆಯಲ್ಲಿಯೇ ಅವರ ಸಂಬಳದ ಹಣ ಜಮಾ ಆಗುತ್ತಿತ್ತು. ಇವರು ವಾಸ್ತವ್ಯ ಮಾಡುವುದು ಬೆಂಗಳೂರಿನಲ್ಲಿ. ಅವರು ಬೆಂಗಳೂರು ನಗರದಲ್ಲಿರುವ ಗ್ರಾಹಕ ವೇದಿಕೆಯಲ್ಲಿ ಗ್ರಾಹಕ ರಕ್ಷಣೆ ಕಾಯ್ದೆ ಸೆಕ್ಷನ್ ೧೨ರ ಅಡಿಯಲ್ಲಿ ಎಸ್‌ಬಿಎಂ ವಿರುದ್ಧ ದೂರೊಂದನ್ನು ದಾಖಲಿಸುತ್ತಾರೆ. ತಮಗೆ ಅರಿವಿಲ್ಲದೆ ತಮ್ಮ ಖಾತೆಯಿಂದ ತೆಗೆದಿರುವ ೮೦,೦೮೦ ರುಪಾಯಿಗಳನ್ನು ತಮಗೆ ಬಡ್ಡಿ ಸಹಿತ ಕೊಡಿಸಬೇಕು. ಬ್ಯಾಂಕಿನಿಂದ ಸೇವಾ ನ್ಯೂನತೆ ಆಗಿದ